1. ಅಕಾಡೆಮಿಯ ರಿಜಿಸ್ಟ್ರಾರ್ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರತಕ್ಕದ್ದು.
2. ಅವರು ಅಕಾಡೆಮಿಯು ಸ್ಥಾಪಿಸಬಹುದಾದ ಸ್ಥಾಯಿ ಸಮಿತಿ ಮತ್ತು ಇತರ ಸಮಿತಿಯ ಪದನಿಮಿತ್ತ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸತಕ್ಕದ್ದು.
3. ರಿಜಿಸ್ಟ್ರಾರರ ಕರ್ತವ್ಯಗಳು ಕೆಳಕಂಡಂತಿರತಕ್ಕದ್ದು :
• ಅಕಾಡೆಮಿಯ ದಾಖಲೆಗಳನ್ನು ಮತ್ತು ಅಂಥ ಇತರ ಸ್ವತ್ತುಗಳನ್ನು ಸಂರಕ್ಷಿಸುವುದು.
• ಅಕಾಡೆಮಿಯ ಪರವಾಗಿ ಅಧಿಕೃತ ಪತ್ರ ವ್ಯವಹಾರ ನಡೆಸುವುದು.
• ಅಕಾಡೆಮಿಯ ಸಂಪೂರ್ಣ ಆಡಳಿತ ನಿರ್ವಹಣೆ ಹಾಗೂ ಸಿಬ್ಬಂದಿಯ ಮೇಲ್ವಿಚಾರಣೆ ನಿಯಂತ್ರಣ ಮಾಡುವುದು.
• ಅಕಾಡೆಮಿಯ ಮತ್ತು ಅಕಾಡೆಮಿಯಿಂದ ನೇಮಕಗೊಂಡ ಎಲ್ಲ ಸಮಿತಿಗಳು ಸಭೆ ನಡೆಸುವ ಬಗ್ಗೆ ನೋಟೀಸುಗಳನ್ನು ನೀಡುವುದು.
• ಈ ಎಲ್ಲಾ ಸಭೆಗಳ ನಡವಳಿಗಳನ್ನು ಸಿದ್ಧಪಡಿಸುವುದು ಮತ್ತು ನಿರ್ವಹಿಸುವುದು.
• ಅಕಾಡೆಮಿಯಿಂದ ಅನುಮೋದಿತವಾದ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದು.
• ಅಕಾಡೆಮಿಯ ಪರವಾಗಿ ಕರಾರುಗಳಿಗೆ ರುಜು ಹಾಕುವುದು.
• ಚಾಲ್ತಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ, ಸರ್ಕಾರಿ ಅರ್ಥಿಕ ಸಂಹಿತ ಹಾಗೂ ಸಾದಿಲ್ವಾರು ನಿಯಮಗಳ ವ್ಯಾಪ್ತಿಗೊಳಪಟ್ಟ ವೆಚ್ಚವನ್ನು ಭರಿಸುವುದು. ಅಕಾಡೆಮಿಯ ಕಾರ್ಯಚಟುವಟಿಕೆ ಹಾಗೂ ಲೆಕ್ಕಪತ್ರಗಳ ತ್ರೈಮಾಸಿಕ ವರದಿಯನ್ನು ಕನ್ನಡ ಮತ್ತು ಸಂಸ್ಕøತಿ ನಿರ್ದೇಶಕರಿಗೆ ಸಲ್ಲಿಸುವುದು.
• ಸ್ವತ್ತು ಮತ್ತು ವಿನಿಯೋಗಗಳ ವ್ಯವಸ್ಥೆ ನೋಡಿಕೊಳ್ಳತಕ್ಕದ್ದು. ವಾರ್ಷಿಕ ಅಂದಾಜುಗಳನ್ನು ಮತ್ತು ಲೆಕ್ಕಪತ್ರಗಳ ವಿವರಣೆಗಳನ್ನು ಅರ್ಥ ಸದಸ್ಯರ ಸಮಾಲೋಚನೆಯಿಂದ ತಯಾರಿಸುವ ಮತ್ತು ಅಕಾಡೆಮಿಗಳಿಗೆ ಅವುಗಳನ್ನು ಒಪ್ಪಿಸುವ ಜವಾಬ್ದಾರಿ ಹೊಂದಿರತಕ್ಕದ್ದು.
• ಅಕಾಡೆಮಿಯ ಲೆಕ್ಕಪತ್ರಗಳನ್ನು ನಿರ್ವಹಿಸುವುದು ಮತ್ತು ಅಕಾಡೆಮಿಗೆ ಸಂದಾಯವಾಗುವ ಯಾವುದೇ ಹಣ್ಣಕ್ಕೆ ರಶೀದಿ ಹಾಕುವುದು.
• ವರ್ಷದ ಅಯವ್ಯಯದ ಪರಿಮಿತಿಯಲ್ಲಿ ಹಾಗೂ ಅರ್ಥಿಕ ನಿಯಮಗಳಿಗೊಳಪಟ್ಟ ವಾರ್ಷಿಕ ಕ್ರಿಯಾಯೋಜನೆಯನ್ನು ಸ್ಥಾಯಿ ಸಮಿತಿ ಮೂಲಕ ಪೂರ್ವಭಾವಿಯಾಗಿ ರೂಪಿಸಿ ಸರ್ಕಾರದ ಅನುಮೋದನೆಗೆ ಸಲ್ಲಿಸಬೇಕು. ಅನುಮೋದಿತವಾದ ಈ ಕ್ರಿಯಾಯೋಜನೆಯ ಪ್ರಕಾರ ಅನುಷ್ಠಾನಗೊಳಿಸಿ, ಅದರ ಭೌತಿಕ ಮತ್ತು ಅರ್ಥಿಕ ಪ್ರಗತಿಯ ವರದಿಯನ್ನು ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯದ ಮೂಲಕ ಮೂರು ತಿಂಗಳಿಗೊಮ್ಮೆ ಸರ್ಕಾರಕ್ಕೆ ಸಲ್ಲಿಸಬೇಕು.
• ಅಕಾಡೆಮಿಯು ವಹಿಸಿಕೊಡಬಹುದಾದಂಥ ಇತರ ಅಧಿಕಾರಗಳನ್ನು ಚಲಾಯಿಸಬಹುದು.
|